1

1 ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ

2 ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.

3 ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

4 ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.

5 ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.

6 ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.

7 ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.

8 ಆಗ ಅವನು ನೀನ್ಯಾರು ಅಂದನು.

9 ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.

10 ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.

11 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು

12 ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.

13 ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.

14 ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.

15 ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.

16 ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.

17 ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.

18 ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

19 ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!

20 ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

21 ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.

22 ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.

23 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.

24 ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.

25 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.

26 ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.

27 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.

2

1 ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

2 ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.

3 ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.

4 ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

5 ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.

6 ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

7 ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

8 ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

9 ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

10 ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.

11 ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

12 ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.

13 ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.

14 ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.

15 ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.

16 ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.

17 ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.

18 ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

19 ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.

20 ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.

21 ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.

22 ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.

23 ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.

24 ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.

25 ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.

26 ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

27 ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.

28 ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.

29 ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.

30 ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.

31 ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.

32 ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

3

1 ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

2 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ

3 ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ

4 ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

5 ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.

6 ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

7 ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.

8 ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?

9 ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

10 ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.

11 ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

13 ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.

14 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.

15 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.

16 ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.

17 ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.

18 ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

19 ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.

20 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

21 ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

22 ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.

23 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

24 ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

25 ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

26 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

27 ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

28 ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

29 ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

30 ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

31 ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.

33 ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

34 ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.

35 ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

36 ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.

37 ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.

38 ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?

39 ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.

4

1 ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.

2 ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್‌; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.

3 ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.

4 ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.

5 ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.

6 ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.

7 ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು

8 ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

9 ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ

10 ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

11 ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.

12 ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.

5

1 ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.

3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

4 ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

5 ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

6 ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.

7 ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.

8 ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

9 ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.

10 ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.

11 ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

12 ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.

13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

14 ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌

15 ಸೊಲೊಮೋನ್‌ ಇಬ್ಹಾರ್‌

16 ಎಲೀಷೂವ ನೆಫೆಗ್‌ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್‌ ಇವರೇ.

17 ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.

18 ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.

19 ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

20 ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

21 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

22 ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

23 ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

24 ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.

25 ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.

6

1 ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು

2 ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.

3 ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

4 ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

5 ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

6 ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

7 ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

8 ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.

9 ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.

10 ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.

11 ಕರ್ತನ ಮಂಜೂ ಷವು ಗತ್‌ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.

12 ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

13 ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

14 ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.

15 ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

16 ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.

17 ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

18 ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

19 ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

20 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

21 ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.

22 ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.

23 ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.

7

1 ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,

2 ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.

3 ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

4 ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--

5 ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

6 ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.

7 ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್‌ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?

8 ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;

9 ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.

10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

11 ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.

12 ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

13 ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

14 ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

15 ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.

16 ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.

17 ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.

18 ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

19 ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

20 ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?

21 ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.

22 ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

23 ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.

24 ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.

25 ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.

26 ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

27 ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.

28 ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.

29 ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.

8

1 ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.

2 ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.

3 ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ

4 ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.

5 ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

6 ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

7 ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.

9 ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ

10 ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.

11 ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು

12 ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.

13 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

14 ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.

15 ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

16 ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.

17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.

18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

9

1 ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.

2 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.

3 ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.

4 ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.

5 ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.

6 ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.

7 ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.

8 ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.

9 ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.

10 ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.

11 ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.

12 ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.

13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

10

1 ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.

2 ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.

3 ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.

4 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.

5 ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.

6 ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

7 ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.

8 ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.

9 ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.

10 ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--

11 ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.

12 ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

13 ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.

14 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.

15 ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.

16 ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.

17 ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.

18 ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.

19 ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.

11

1 ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.

2 ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.

3 ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.

4 ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.

5 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.

6 ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.

7 ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.

8 ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.

9 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.

10 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.

11 ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.

12 ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.

13 ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.

14 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.

15 ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.

16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.

17 ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.

18 ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--

19 ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--

20 ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?

21 ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.

22 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.

23 ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.

24 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.

25 ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.

26 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.

27 ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

12

1 ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.

2 ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.

3 ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.

4 ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.

5 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

6 ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

7 ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು

8 ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.

9 ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

10 ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.

11 ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.

12 ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.

13 ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

14 ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.

15 ಆಗ ನಾತಾನನು ತನ್ನ ಮನೆಗೆ ಹೋದನು.

16 ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.

17 ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.

18 ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.

19 ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.

20 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.

21 ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.

22 ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.

23 ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.

24 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.

25 ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.

26 ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.

27 ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.

28 ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.

29 ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.

30 ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.

31 ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.

13

1 ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.

3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.

4 ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.

5 ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.

6 ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.

7 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.

8 ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.

9 ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.

10 ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.

11 ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.

12 ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.

13 ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.

14 ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.

15 ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.

16 ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.

17 ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.

18 ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.

19 ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.

20 ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.

21 ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.

22 ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.

23 ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.

24 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.

25 ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.

26 ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.

27 ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.

28 ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.

29 ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.

30 ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.

31 ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.

32 ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;

33 ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.

34 ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.

35 ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.

36 ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.

37 ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

38 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.

39 ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

14

1 ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.

2 ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು

3 ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.

4 ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.

5 ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.

6 ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.

7 ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.

8 ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.

9 ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.

10 ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.

11 ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.

12 ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.

13 ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.

14 ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

15 ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.

16 ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.

17 ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

18 ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

19 ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

20 ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.

21 ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.

22 ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.

23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

24 ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.

25 ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.

26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.

27 ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.

28 ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.

29 ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.

30 ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

31 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.

32 ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.

33 ಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.